ಬೆಂಗಳೂರು ಪೊಲೀಸ್ ಇಲಾಖೆಯ ಈಶಾನ್ಯ ವಿಭಾಗದಲ್ಲಿ ‘ಪೊಲೀಸ್ ಮಾರ್ಷಲ್’ಗಳಾಗಿ 700 ಮಂದಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು ಬುಧವಾರ ನಡೆದ ಕಾರ್ಯಕ್ರಮದಲ್ಲಿ ಅವರಿಗೆ ಪ್ರಮಾಣಪತ್ರ ವಿತರಣೆ ಮಾಡಲಾಯಿತು.
ಆರೋಹಣ ಸಂಸ್ಥೆ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಈಶಾನ್ಯ ವಿಭಾಗ ವ್ಯಾಪ್ತಿಯ ಕಾಲೇಜುಗಳಲ್ಲಿ ಈ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಂಡು ತರಬೇತಿ ನೀಡಲಾಗಿದೆ. ಪೊಲೀಸ್ ಮಾರ್ಷಲ್’ಗಳಿಗೆ ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ್ ಪ್ರತಿಜ್ಞಾ ವಿಧಿ ಬೋಧಿಸಿದರು.


