ಜನಾಂಗೀಯ ಸಂಘರ್ಷ ತಾರಕಕ್ಕೇರಿರುವ ಮಣಿಪುರದಲ್ಲಿ ಮತ್ತೆ ಘರ್ಷಣೆ. ಚುರಾಚಂದ್ ಪುರ ಮತ್ತು ಬಿಷ್ಣುಪುರ ಜಿಲ್ಲೆಗಳ ಗಡಿಯಲ್ಲಿ ನಡೆದ ಕೋಮುಗಲಭೆಯಲ್ಲಿ ಮತ್ತಿಬ್ಬರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಆಗಸ್ಟ್ 29ರಂದು ಈ ಭಾಗದಲ್ಲಿ ಗುಂಡಿನ ದಾಳಿ ಆರಂಭವಾಗಿದೆ. ಎರಡು ಬಣಗಳ ನಡುವೆ ಬುಧವಾರ ಆರಂಭವಾದ ಗುಂಡಿನ ಚಕಮಕಿ ಗುರುವಾರ ಬೆಳಗಿನ ಜಾವದವರೆಗೂ ಮುಂದುವರಿದಿದೆ. ಐವರು ಗಾಯಗೊಂಡಿದ್ದು, ಮೂವರನ್ನು ಚುರಚಂದಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಭದ್ರತಾ ಮೂಲಗಳು ತಿಳಿಸಿವೆ. ಕುಕಿ-ಸೋಮಿ ಸಮುದಾಯದ ಇಬ್ಬರು ಸಾವನ್ನಪ್ಪಿದ್ದಾರೆ.
ಇದರೊಂದಿಗೆ, ಆಗಸ್ಟ್ 29 ರಂದು ಪ್ರಾರಂಭವಾದ ಹಿಂಸಾಚಾರದಲ್ಲಿ ಈ ಪ್ರದೇಶದಲ್ಲಿ ಸತ್ತವರ ಸಂಖ್ಯೆ ನಾಲ್ಕಕ್ಕೆ ಏರಿದೆ. ಇದೇ ವೇಳೆ ಚುರಚಂದಪುರದಲ್ಲಿ ಕುಕಿ ವಿಭಾಗ ಅನಿರ್ದಿಷ್ಟಾವಧಿ ಬಂದ್‌ಗೆ ಕರೆ ನೀಡಿದೆ. ಕುಕಿ ಬಹುಸಂಖ್ಯಾತ ಪ್ರದೇಶಗಳಲ್ಲಿ ದಾಳಿಗಳು ಹೆಚ್ಚಾದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.


