ಬೆಂಗಳೂರು: ಹತ್ತು ವರ್ಷಗಳಿಂದ ಸುಲಿಗೆ, ಕೊಲೆ ಪ್ರಯತ್ನ ಸೇರಿದಂತೆ ವಿವಿಧ ಅಪರಾಧ ಕೃತ್ಯದಲ್ಲಿ ಭಾಗಿಯಾಗುತ್ತಿದ್ದ ರೌಡಿಶೀಟರ್ ಇರ್ಫಾನ್ ಅಲಿಯಾಸ್ ರಹೀಮುಲ್ಲಾನನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈತ ರೌಡಿ ಚಟುವಟಿಕೆಯಲ್ಲಿ ಭಾಗಿಯಾಗುತ್ತಿದ್ದ. ಕಳೆದ 10 ವರ್ಷಗಳಲ್ಲಿ ಭಾಗಿಯಾಗಿರುವ ಎಲ್ಲ ಅಪರಾಧ ಪ್ರಕರಣಗಳ ದಾಖಲೆಗಳನ್ನು ಸಂಗ್ರಹಿಸಿ ಪ್ರತಿಬಂಧಕ ಕಾಯ್ದೆ ಅಡಿಯಲ್ಲಿ ಬಂಧಿಸಲು ಸಿಸಿಬಿ ಸಂಘಟಿತ ಅಪರಾಧ ದಳದ ಅಧಿಕಾರಿಗಳು ಪ್ರಸ್ತಾವ ಸಲ್ಲಿಸಿದ್ದರು.


