ಬೆಂಗಳೂರು: ಆರೋಪ ಪಟ್ಟಿಯಿಂದ ಹೆಸರು ಕೈಬಿಡುವುದಕ್ಕೆ ಲಂಚ ಪಡೆಯುತ್ತಿದ್ದ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೈಬರ್ ಪೊಲೀಸ್ ಠಾಣೆ ಹೆಡ್ ಕಾನ್ ಸ್ಟೆಬಲ್ ಎಂ. ಲೋಕೇಶ್ ಅವರನ್ನು ಲೋಕಾಯುಕ್ತ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಲಂಚಕ್ಕೆ ಬೇಡಿಕೆಯಿಟ್ಟ ಸಂಬಂಧ ಕಾಮಾಕ್ಷಿಪಾಳ್ಯದ ನಿವಾಸಿ ರೂಪಾ ಅವರು ಲೋಕಾಯುಕ್ತ ನಗರ ಪೊಲೀಸರಿಗೆ ದೂರು ನೀಡಿದ್ದರು. ದೂರು ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.


