ಸೆಪ್ಟೆಂಬರ್ ತಿಂಗಳ ಮೊದಲ ವಾರದಲ್ಲಿ ಮಳೆ ಬೀಳುವ ಮುನ್ಸೂಚನೆ ಇರುವ ಕಾರಣ ಪಾಲಿಕೆಯ ವಲಯಗಳ ಆಯುಕ್ತರು, ಜಂಟಿ ಆಯುಕ್ತರು ಮತ್ತು ಮುಖ್ಯ ಅಭಿಯಂತರರು ಮಳೆ ಅವಘಡಗಳನ್ನು ಎದುರಿಸಲು ಸಜ್ಜಾಗಿರಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.
ನಿನ್ನೆ ರಾತ್ರಿ ಸುರಿದ ಭಾರೀ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮುಖ್ಯ ಅಭಿಯಂತರರು ಭೇಟಿ ನೀಡಿ ಅಹವಾಲುಗಳಿಗೆ ಕೂಡಲೇ ಸ್ಪಂದಿಸಬೇಕು. ಅತಿವೃಷ್ಟಿ ಪ್ರದೇಶಗಳಲ್ಲಿ ಪರಿಹಾರ ಕಾರ್ಯದಲ್ಲಿ ತೊಡಗಿಕೊಳ್ಳಬೇಕು ಎಂದು ನಿರ್ದೇಶಿಸಿದರು.


