ಮದ್ಯದ ಅಮಲಿನಲ್ಲಿ ಪಿಸ್ತೂಲ್ ನಿಂದ ಗುಂಡು ಹಾರಿಸಿ ಭಯವನ್ನುಂಟು ಮಾಡಿದ್ದ ಆರೋಪದಡಿ ಮಾಜಿ ಸೈನಿಕ ಪ್ರಶಾಂತ್ (39) ಅವರನ್ನು ಬಂಧಿಸಿದ್ದ ತಿಲಕ್ ನಗರ ಠಾಣೆ ಪೊಲೀಸರು, ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.
ಆಗಸ್ಟ್ 26ರಂದು ತಡರಾತ್ರಿ ನಡೆದಿದ್ದ ಘಟನೆ ಸಂಬಂಧ ಪಿ. ಪಿ. ಅನಿಲ್ ಕುಮಾರ್ ಅವರು ದೂರು ನೀಡಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿಯನ್ನು ಸೆರೆ ಹಿಡಿಯಲಾಗಿತ್ತು. ಇದೀಗ, ಅವರನ್ನು ಬಿಡುಗಡೆ ಮಾಡಲಾಗಿದೆ. ಪ್ರಕರಣದ ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.


