“ಶಾಸಕರದ್ದು ಒಂದಷ್ಟು ಬೇಡಿಕೆಗಳು, ತೊಂದರೆಗಳು ಇರುತ್ತವೆ, ಅವುಗಳನ್ನು ಮುಖ್ಯಮಂತ್ರಿಗಳ ಬಳಿ ಹೇಳಿಕೊಳ್ಳಬಾರದೇ? ಶಾಸಕರು ತಮ್ಮ ನೋವು ಸಮಸ್ಯೆ ಹೇಳಿಕೊಳ್ಳುವುದರಲ್ಲಿ ತಪ್ಪೇನಿದೆ?” ಎಂದು ಉಪಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್ ತಿಳಿಸಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರು ಶಾಸಕ ಬಸವರಾಜ ರಾಯರೆಡ್ಡಿ ಅವರು ಸಿಎಂಗೆ ಬರೆದಿರುವ ಪತ್ರದ ವಿಚಾರವಾಗಿ ಕೇಳಿದ ಪಶ್ನೆಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಪಕ್ಷದ ಒಳಗೆ ಶಿಸ್ತು ಇದೆ ಯಾವುದೇ ತೊಂದರೆ ಇಲ್ಲ. ಯಾವ ಶಾಸಕರು ಸರ್ಕಾರದ ವಿರುದ್ಧ ಅಸಮಾಧಾನ ಹೊಂದಿಲ್ಲ, ಇದೆಲ್ಲ ಮಾಧ್ಯಮಗಳ ಸೃಷ್ಟಿ” ಎಂದು ಸ್ಪಷ್ಟನೆ ನೀಡಿದರು.


