ಬೆಂಗಳೂರು : ಭ್ರಷ್ಟಾಚಾರ ನಿಗ್ರಹ ದಳ (ಎಸಿಬಬಿ) ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳನ್ನು ಬೆದರಿಸಿ ಹಣ ಸುಲಿಗೆ ಮಾಡುತ್ತಿದ್ದ ಆರೋಪದಡಿ ಸಂತೋಷ್ ಕೊಪ್ಪದ (25) ಅವರನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಸಂತೋಷ್, ಎಸ್ಸೆಸ್ಸೆಲ್ಸಿವರೆಗೆ ಓದಿದ್ದ. ಎಸಿಬಿ ಅಸ್ತಿತ್ವದಲ್ಲಿದ್ದ ಸಂದರ್ಭದಲ್ಲಿ ಡಿವೈಎಸ್ಪಿ ಎಂದು ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದ ಆರೋಪಿ ವಿಶಾಲ್ ಪಾಟೀಲ ಜತೆ ಸೇರಿ ಕೃತ್ಯ ಎಸಗುತ್ತಿದ್ದ. ವಿಶಾಲ್ ಸದ್ಯ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ಹೇಳಿವೆ.


