ಜಮ್ಮು ಕಾಶ್ಮೀರ: 4 ವರ್ಷದ ಬಾಲಕಿಯನ್ನು ಚಿರತೆಯೊಂದು ಎತ್ತಿಕೊಂಡು ಹೋಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಉಧಮ್ ಪುರದಲ್ಲಿ ನಡೆದಿದೆ. ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಚಿರತೆ ಬಾಲಕಿಯನ್ನು ಎಳೆದುಕೊಂಡು ಹೋಗಿದೆ.
ಈ ಅವಘಡದ ಬಗ್ಗೆ ಮಾಹಿತಿ ಪಡೆದ ತಕ್ಷಣ ಆ ಪ್ರದೇಶದ ರೇಂಜ್ ಆಫೀಸರ್ ಉಧಮ್‌ಪುರ ಕಂಟ್ರೋಲ್ ರೂಮ್ ನಿಂದ ಶೋಧ ತಂಡಗಳನ್ನು ಕಳುಹಿಸಿದ್ದಾರೆ. ಆದರೆ ಇನ್ನೂ ಆ ಬಾಲಕಿಯ ಪತ್ತೆಯಾಗಿಲ್ಲ. ನಾವು ಉಧಮ್ ಪುರ ನಿಯಂತ್ರಣ ಕೊಠಡಿಯಿಂದ ಶೋಧ ತಂಡಗಳನ್ನು ಕಳುಹಿಸಿದ್ದೇವೆ.
ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳುತ್ತೇವೆ. ಇದೊಂದು ಅತ್ಯಂತ ದುರದೃಷ್ಟಕರ ಘಟನೆಯಾಗಿದೆ ಎಂದಿದ್ದಾರೆ.


