ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಶೆಟ್ಟಿಕೆರೆ ಹಾಲಿನ ಡೈರಿಯಲ್ಲಿ ಪಶು ಆಹಾರ ಉತ್ಪನ್ನವನ್ನು ನೀಡಲು ವಿಳಂಬ ಧೋರಣೆ ಅನುಸರಿಸಿದ್ದಾರೆ ಎಂದು ಆರೋಪಿಸಿ ಶೆಟ್ಟಿಕೆರೆ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಶಿವಕುಮಾರ್ ಮೇಲೆ ಹಲ್ಲೆ ನಡೆಸಲಾಗಿದ್ದು.
ಕ್ಷುಲ್ಲಕ ವಿಚಾರಕ್ಕೆ ಕರ್ತವ್ಯನಿರತ ಶಿವಕುಮಾರ್ ಮೇಲೆ ಏಕಾಏಕಿ ಹಲ್ಲೆ ಮಾಡಲಾಗಿದ್ದು ಕೇಳಿದ ತಕ್ಷಣ ಬೂಸಾ ಕೊಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಾಗರಾಜು, ಯೋಗಾನಂದ್, ಅನಿಲ್ ಎಂಬುವರಿಂದ ಶಿವಕುಮಾರ್ ಮೇಲೆ ಹಲ್ಲೆ ಮಾಡಲಾಗಿದೆ ಅಲ್ಲದೆ ಬೂಸಾ ಗೋದಾಮಿಗೆ ನುಗ್ಗಿ ದಾಂದಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಹಲ್ಲೆ ನಡೆಸಿದ ಮೂವರ ವಿರುದ್ದ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಸ್ಥಳಕ್ಕೆ ಚಿಕ್ಕನಾಯಕನಹಳ್ಳಿ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದರು. ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


