ವಿರೋಧ ಪಕ್ಷಗಳ ಮೈತ್ರಿಕೂಟಕ್ಕೆ ಹೆದರಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರವು ರಿಪಬ್ಲಿಕ್ ಆಫ್ ಇಂಡಿಯಾ ಅನ್ನು ರಿಪಬ್ಲಿಕ್ ಆಫ್ ಭಾರತ ಮಾಡಲು ಹೊರಟಿದ್ದಾರೆ, ಎಂದು ಡಿಸಿಎಂ ಡಿಕೆಶಿ ತಿಳಿಸಿದ್ದಾರೆ. ಬಿಜೆಪಿ ಹಾಗೂ ಕೇಂದ್ರ ಸರ್ಕಾರ ಮುಂದಿನ ಚುನಾವಣೆಯಲ್ಲಿ ಸೋಲನ್ನು ನೋಡುತ್ತಿರುವುದನ್ನು ಈ ಸಮಯದಲ್ಲಿ ಗಮನಿಸಬಹುದು.
ನಮ್ಮ ದೇಶದ ನಗದಿನ ಮೇಲೆ ಇಂಡಿಯಾ ಅಂತಾ ಇದೆ. ಇದನ್ನು ಬದಲಿಸಲು ಹೊರಟಿದ್ದಾರೆ. ನಾವೆಲ್ಲರೂ ಭಾರತೀಯರೇ. ಸೋಲಿಗೆ ಹೆದರಿ ಈ ರೀತಿ ಮಾಡುತ್ತಿರುವುದು ಸರಿಯಲ್ಲ ಎಂದರು.


