ಕೊರಟಗೆರೆ: ಬಸ್ ಹರಿದು ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷೆಯೊಬ್ಬರು ಮೃತಪಟ್ಟ ದಾರುಣ ಘಟನೆ ತುಮಕೂರು ಜಿಲ್ಲೆಯ ಕೊರಟಗರೆ ತಾಲೂಕಿನ ಜೆಟ್ಟಿ ಅಗ್ರಹಾರ ಗ್ರಾಮದಲ್ಲಿ ನಡೆದಿದೆ.
ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಕೆಂಪಕ್ಕ ಮೃತಪಟ್ಟ ಮಹಿಳೆಯಾಗಿದ್ದು, ಜೆಟ್ಟಿ ಅಗ್ರಹಾರ ಪೋಸ್ಟ್ ಆಫೀಸ್ ಗೆ ಆಗಮಿಸಿದ್ದ ಸಂದರ್ಭದಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಅತೀ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದ ಬಂದ ಖಾಸಗಿ ಬಸ್ಸೊಂದು ಕೆಂಪಕ್ಕ ಅವರ ಮೇಲೆ ಹರಿದಿದ್ದು, ಪರಿಣಾಮವಾಗಿ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಕೆಂಪಕ್ಕ ಅವರು ಥರಟಿ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷೆಯಾಗಿದ್ದರು ಎಂದು ತಿಳಿದು ಬಂದಿದೆ. ತಮ್ಮ ಪೆನ್ಷನ್ ಹಣವನ್ನು ಪಡೆಯಲು ಅವರು ಜೆಟ್ಟಿ ಅಗ್ರಹಾರ ಪೋಸ್ಟ್ ಆಫೀಸ್ ಗೆ ಆಗಮಿಸಿದ್ದರು ಎನ್ನಲಾಗಿದೆ. ರಸ್ತೆ ದಾಟಲು ಮುಂದಾಗುತ್ತಿದ್ದಂತೆಯೇ ಅತೀ ವೇಗದಿಂದ ಬಂದ ಬಸ್ ಕೆಂಪಕ್ಕ ಮೇಲೆ ಹರಿದಿದೆ.
ಇನ್ನೂ ಘಟನೆ ನಡೆದ ತಕ್ಷಣವೇ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ವಾಟ್ಸಾಪ್ ಗ್ರೂಪ್ ಸೇರಿ: