ಹೆಚ್.ಡಿ.ಕೋಟೆ: ತಾಲ್ಲೂಕಿನ ಹಂಪಾಪುರ ಗ್ರಾಮದ ಕ್ಲಾಸಿಕ್ ಲಿಟಲ್ ಬರ್ಡ್ಸ್ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಶ್ರೀ ಕೃಷ್ಣ ಮೂರ್ತಿಗೆ ಪುಷ್ಪಾರ್ಚನೆಯನ್ನು ಮಾಡಿ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ನರಸಿಂಹರಾಜ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಚಿಣ್ಣರಿಗೆ ಕೃಷ್ಣನ ವೇಷಧರಿಸಿ ಪೋಷಕರು ಮಕ್ಕಳು ಮತ್ತು ಶಿಕ್ಷಕರು ಸಂಭ್ರಮಿಸಿದರು. ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ದೀಪಶ್ರೀ, ಸಹಶಿಕ್ಷಕರಾದ ಅಪ್ಸನಾ, ದೀಪಾಶ್ರೀ ಕೆ.ಎನ್., ಸೌಮ್ಯ, ರಂಜಿತ, ಆರತಿ ಮಕ್ಕಳು ಪೋಷಕರು ಹಾಜರಿದ್ದರು.
ವರದಿ: ಮಲಾರ ಮಹದೇವಸ್ವಾಮಿ


