ಚಿಕ್ಕನಾಯಕನಹಳ್ಳಿ: ಗ್ರಾಮ ಪಂಚಾಯತ್ ಉಪಾಧ್ಯಕ್ಷನನ್ನು ಟಾಟಾ ಏಸ್ ವಾಹನ ಡಿಕ್ಕಿ ಹೊಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದ್ದು, ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಈ ಕೃತ್ಯವನ್ನು ಎಸಗಲಾಗಿದೆ ಎಂದು ವರದಿಯಾಗಿದೆ.
ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆಯ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ 46 ವರ್ಷ ವಯಸ್ಸಿನ ಅಶೋಕ್ ಎಂಬವರು ಸೋಮಶೇಖರ್ ಎಂಬವರ ಜೊತೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಏಕಾಏಕಿ ಟಾಟಾ ಏಸ್ ವಾಹನದಿಂದ ಹಿಂಬದಿಯಿಂದ ಡಿಕ್ಕಿ ಹೊಡೆಸಲಾಗಿದ್ದು, ಪರಿಣಾಮವಾಗಿ ಅಶೋಕ್ ಅವರು ಸ್ಥಳದಲ್ಲೇ ಸಾವನ್ನಪ್ಪಿ ಸೋಮಶೇಖರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಸದ್ಯದ ವರದಿಗಳ ಪ್ರಕಾರ, ಗ್ರಾ.ಪಂ. ಉಪಾಧ್ಯಕ್ಷ ಅಶೋಕ್ ಹಾಗೂ ಭೀಮಾ ನಾಯ್ಕ್ ತಾಂಡದ ನಾಗರಾಜ್ ನಾಯ್ಕ್ ಎಂಬವರ ನಡುವೆ ಹಣಕಾಸಿನ ವಿಚಾರಕ್ಕಾಗಿ ವೈಷಮ್ಯವಿದ್ದು, ಈ ಹಳೆಯ ವೈಷಮ್ಯದಿಂದ ಈ ಹತ್ಯೆ ನಡೆದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
ವಾಟ್ಸಾಪ್ ಗ್ರೂಪ್ ಸೇರಿ: