ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಾಡದೇವಿ ಭುವನೇಶ್ವರಿ ಪ್ರತಿಮೆ ನಿರ್ಮಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತೀರ್ಮಾನಿಸಲಾಗಿದೆ.
ಇನ್ನು ಮುಂದೆ ನಾಡದೇವಿ “ಭುವನೇಶ್ವರಿ’ಗೆ ನಿತ್ಯ ಅರ್ಚನೆ ನೆರವೇರಲಿದೆ. ಪ್ರತಿಮೆ ಸ್ಥಾಪಿಸುವ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಈಗಾಗಲೇ ತಿಂಗಳಲ್ಲಿ ಎರಡು ಬಾರಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಪ್ರತಿಮೆ ನಿರ್ಮಾಣ ಸಂಬಂಧ ತುರ್ತು ಕ್ರಮವಹಿಸುವಂತೆ ಸೂಚಿಸಿದ್ದಾರೆ.


