ತುಮಕೂರು: ತುಮಕೂರು ಮಹಾನಗರ ಪಾಲಿಕೆಯಲ್ಲಿ ಸಾರ್ವಜನಿಕರ ಕೆಲಸಗಳನ್ನು ತುರ್ತಾಗಿ ಜವಾಬ್ದಾರಿಯಿಂದ ನಿರ್ವಹಿಸದೆ ಸತಾಯಿಸಲಾಗುತ್ತಿದೆ ಎಂದು ಆರೋಪಿಸಿ ತುಮಕೂರು ಮಹಾನಗರ ಪಾಲಿಕೆಯ 30ನೇ ವಾರ್ಡಿನ ಸದಸ್ಯ ವಿಷ್ಣುವರ್ಧನ್ ದಿಢೀರನೆ ಪಾಲಿಕೆ ಆಯುಕ್ತರ ಕಚೇರಿ ಕೊಠಡಿ ಎದುರು ಕುಳಿತು ಧರಣಿ ನಡೆಸಿದರು.
ಸಾರ್ವಜನಿಕರ ಖಾತೆಗಳಿಗೆ ಸಂಬಂಧಪಟ್ಟಂತೆ ತಿದ್ದುಪಡಿ ಮಾಡುವುದು ಸೇರಿದಂತೆ ಕುಡಿಯುವ ನೀರಿನ ಯೋಜನೆಗಳಿಗೆ ಸಂಬಂಧಪಟ್ಟಂತೆ ಇಲಾಖೆ ಅಧಿಕಾರಿಗಳು ಯಾವುದೇ ರೀತಿಯಲ್ಲೂ ಸಾರ್ವಜನಿಕರಿಗೆ ಸ್ಪಂದಿಸುತ್ತಿಲ್ಲ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದ್ದಾರೆ ಇದರಿಂದ ವಾರ್ಡಿನ ಅನೇಕ ಮಂದಿ ತಮ್ಮ ಬಳಿ ಅಳಲು ತೋಡಿಕೊಳ್ಳುತ್ತಿದ್ದಾರೆ ಎಂದು ಸದಸ್ಯ ವಿಷ್ಣುವರ್ಧನ್ ಆರೋಪಿಸಿದರು.
ಸ್ಥಳಕ್ಕೆ ಬಂದ ಪಾಲಿಕೆ ಆಯುಕ್ತೆ ಹಾಗೂ ನಗರಸಭೆ ಉಪಾಧ್ಯಕ್ಷರು ವಿಷ್ಣುವರ್ಧನ್ ಅವರನ್ನು ಸಮಾಧಾನಪಡಿಸಲು ಯತ್ನಿಸಿದರು ಸಾಧ್ಯವಾಗಲಿಲ್ಲ ಅಲ್ಲದೆ ಸ್ಥಳದಲ್ಲಿಯೇ ಇದ್ದ ನೊಂದ ಅರ್ಜಿದಾರರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿದರು ಅಲ್ಲದೆ ಇದರ ಕುರಿತು ಭರವಸೆ ದೊರೆತ ನಂತರ ಧರಣಿ ಹಿಂಪಡೆದರು.