ತುಮಕೂರು: ರಾಜ್ಯದಲ್ಲಿ ಕಾಂಗ್ರೆಸ್ ಜನಪ್ರಿಯತೆ ಇದೆ, ಹಾಗಾಗಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮುಖಂಡರು ಆತಂಕದಲ್ಲಿ ಇದ್ದಾರೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಟೀಕಿಸಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಅವರು, ಈ ಆತಂಕದಿಂದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖಂಡರು ಮೈತ್ರಿ ಮಾಡಿಕೊಂಡಿದ್ದಾರೆ. ಬಿಜೆಪಿ ಸರ್ಕಾರ ಆಡಳಿತದಿಂದ ಜನರ ಜೀವನ ದುಸ್ತರ ಆಗಿದ್ದು ಉದ್ಯೋಗ ಕೊಡ್ತಿನಿ ಎಂದು ಕೋಟ್ಯಂತರ ಜನರ ಉದ್ಯೋಗ ಕಿತ್ತುಕೊಂಡಿದ್ದಾರೆ. ಶ್ರೀಮಂತರ ಬಿಜೆಪಿ ವಿರುದ್ದ ದುಡಿಯುವ ಜನ ದಂಗೆ ಎದ್ದಿದ್ದಾರೆ ಈ ಆತಂಕದಿಂದ ಅವರು ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದರು.
ವಿಧಾನಸಭಾ ಚುನಾವಣಾ ಫಲಿತಾಂಶ ಬಂದು ನಾಲ್ಕು ತಿಂಗಳಾಗಿದೆ. ವಿಪಕ್ಷ ನಾಯಕರ ಆಯ್ಕೆ ಮಾಡಲು ಅವರಿಂದ ಸಾಧ್ಯ ಆಗಿಲ್ಲ. ಇದು ನಾಲಾಯಕತನ, ಅವರ ಆಂತರಿಕ ಕಚ್ಚಾಟದಿಂದ ವಿಪಕ್ಷ ನಾಯಕ ಆಯ್ಕೆ ಮಾಡಿಕೊಂಡಿಲ್ಲ ಎಂದರು.
ಇವತ್ತು ತುಮಕೂರು ಜಿಲ್ಲೆಗೆ ಬಂದಿದ್ದೇನೆ. ನಾಡಕಚೇರಿ, ತಾಲ್ಲೂಕು ಕಚೇರಿ ಸಬ್ ರಿಜಿಸ್ಟಾರ್ ಕಚೇರಿ ಪರಿಶೀಲನೆ ನಡೆಸಿದ್ದೇನೆ. ಜನರ ಸಮಸ್ಯೆ ಆಲಿಸಿದ್ದೇನೆ, ಅಧಿಕಾರಿಗಳ ಕೆಲಸ ಪರಿಶೀಲಿಸಿದ್ದೇನೆ. ನನ್ನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಕರೆದಿದ್ದೇನೆ ಎಂದರು.
ಕಂದಾಯ ಇಲಾಖೆಯಲ್ಲಿ ಸಾಕಷ್ಟು ಸಮಸ್ಯೆಯಿದೆ. ಅಂತಹ ಸಮಸ್ಯೆಗಳನ್ನು ಪರಿ ಹರಿಸುವ ಕೆಲಸ ಮಾಡುತ್ತಿದ್ದೇನೆ. ಇವತ್ತು ಸಂಜೆವರೆಗೂ ಪರಿಶೀಲನೆ ನಡೆಸುತ್ತೇನೆ ಎಂದರು.
ಜನ ಪರ ಸೇವೆ ಕೊಡಬೇಕು ಅನ್ನೋದು ನಮ್ಮ ಸರ್ಕಾರದ ಹುದ್ದೆ. ಗುಬ್ಬಿ ತಾಲ್ಲೂಕು ನಕಲಿ ಖಾತೆ ಪ್ರಕರಣ. ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತದೆ. ಲೋಕಾಯುಕ್ತ ತನಿಖಾ ವರದಿ ಬಳಿಕ ಕ್ರಮ ಕೈಗೊಳ್ಳುತ್ತೇವೆ. ಯಾವುದೇ ಮೂಲಾಜಿ ಇಲ್ಲದೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.