ಮಂಡ್ಯ: ಕೃಷ್ಣರಾಜಸಾಗರ ಜಲಾಶಯದಲ್ಲಿ ನೀರಿನ ಮಟ್ಟ 98 ಅಡಿಗೆ ಕುಸಿತವಾಗಿದೆ. ತಮಿಳುನಾಡಿಗೆ ನೀರು ಹರಿಸಿದ ಪರಿಣಾಮ 12 ಟಿಎಂಸಿ ನೀರು ಖಾಲಿಯಾಗಿದೆ. ಜಲಾಶಯದ ಹಿನ್ನೀರು ಪ್ರದೇಶ ಬಹುತೇಕ ಬರಡು ಭೂಮಿಯಂತಾಗಿದೆ.
ತಮಿಳುನಾಡಿಗೆ ಮತ್ತಷ್ಟು ನೀರು ಹರಿಸಿದರೆ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗುತ್ತದೆ. ಬೆಳೆಗೆ ನೀರಿಲ್ಲದೆ ಆತಂಕದಲ್ಲಿರುವ ರೈತರು ರಸ್ತೆಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ.


