ಹೆಚ್.ಡಿ.ಕೋಟೆ: ತಾಲ್ಲೂಕಿನ ಬೂದನೂರು ಗಣಿಶೆಡ್ಡು, ಕೆ.ಜಿ.ಹುಂಡಿ ಗ್ರಾಮಗಳಿಗೆ ನೂತನವಾಗಿ ಕೆಎಸ್ ಆರ್ ಟಿ ಸಿ ವತಿಯಿಂದ ಬಸ್ ಸಂಪರ್ಕವನ್ನು ಕಲ್ಪಿಸಲಾಯಿತು.
ಗಣಿಶಡ್ಡು ಗ್ರಾಮದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ, ಟೇಪ್ ಕತ್ತರಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಹೆಚ್.ಡಿ.ಕೋಟೆ ಪೊಲೀಸ್ ಇನ್ಸ್ಪೆಕ್ಟರ್ ಶಬ್ಬೀರ್ ಹುಸೇನ್ ಹಾಗೂ ಘಟಕ ವ್ಯವಸ್ಥಾಪಕ ತ್ಯಾಗರಾಜು ಚಾಲನೆ ನೀಡಿದರು.
ನಂತರ ಮಾತನಾಡಿದ ಹೆಚ್.ಡಿ.ಕೋಟೆ ಸಾರಿಗೆ ಸಂಸ್ಥೆಯ ಘಟಕ ವ್ಯವಸ್ಥಾಪಕ ತ್ಯಾಗರಾಜು, ಬಹುದಿನಗಳಿಂದ ನಮ್ಮ ಗ್ರಾಮಕ್ಕೆ ಬಸ್ ಸಂಪರ್ಕವನ್ನು ಕಲ್ಪಿಸಿ ಕೊಡಿಎಂದು ಬೂದನೂರು ಗಣಿಶೆಡ್ಡು, ಕೆ.ಜಿ.ಹಳ್ಳಿ ಗ್ರಾಮಸ್ಥರು ಮನವಿ ಮಾಡಿದರು. ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಹಾಗೂ ನಮ್ಮ ಮೇಲಾಧಿಕಾರಿಗಳ ಸಹಕಾರದಿಂದ ಇಂದು ಸಂಪರ್ಕವನ್ನು ಕಲ್ಪಿಸಲಾಗಿದೆ. ಇದರ ಸದುಪಯೋಗವನ್ನು ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕೆಂದರು ಚಾಲಕ ಮತ್ತು ನಿರ್ವಾಹಕರ ಜೊತೆಯಲ್ಲಿ ಉತ್ತಮ ರೀತಿಯಲ್ಲಿ ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲಾ ಜನಪ್ರತಿನಿಧಿಗಳು ಮತ್ತು ಮುಖಂಡರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಶಬ್ಬೀರ್ ಹುಸೇನ್ ಘಟಕ ವ್ಯವಸ್ಥಾಪಕ ತ್ಯಾಗರಾಜ್ ರನ್ನು ಸನ್ಮಾನಿಸಿದರು ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲಾರಿಗೂ ಸಿಹಿ ವಿತರಿಸಿ ಗ್ರಾಮಸ್ಥರು ಸಂಭ್ರಮಿಸಿದರು.
ಕಾರ್ಯಕ್ರಮದಲ್ಲಿ ಬೂದುನೂರು ಮಹದೇವ್, ಮಂಜುನಾಥ, ಇವನ್ ರಾಜ್, ಕಲಾಂದಪಾಷ, ತಸ್ಲೀಮ್ ಸಣ್ಣಸ್ವಾಮಿನಾಯಕ, ಸುಬ್ರಮಣಿಗೌಡ, ಮಹಮದ್ ಗಣಿ ಚಂದ್ರೇಗೌಡ ಹಾಗೂ ಗ್ರಾಮಸ್ಥರು ಹಾಜರಿದ್ದರು.
ವರದಿ: ಮಲಾರ ಮಹದೇವಸ್ವಾಮಿ


