G20 ಸಭೆಗೆ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಗೈರು ವಿಚಾರವಾಗಿ ಮಾತನಾಡಿದ ಬಿಜೆಪಿ ಶಾಸಕ ಡಾ. ಅಶ್ವಥ್ ನಾರಾಯಣ, ಇಡೀ ವಿಶ್ವಮಟ್ಟದ ನಾಯಕರು ಬಂದಾಗ ಒಂದೇ ದೇಶ, ಒಂದೇ ಭೂಮಿ ಅಂತ ಮಾತನಾಡಬೇಕಿತ್ತು. ಇದು ಸಿದ್ದರಾಮಯ್ಯ ವೈಯಕ್ತಿಕ ವಿಚಾರ ಅಲ್ಲ. ಕರ್ನಾಟಕ ಇವರ ಮನೆ ಆಸ್ತಿ ಅಲ್ಲ. ಸಾರ್ವಜನಿಕ ಪ್ರತಿನಿಧಿಯಾಗಿ ರಾಜ್ಯದ ಹಿತ ಕಾಪಾಡಲು ಕೆಲಸ ಮಾಡಬೇಕು ಎಂದು ಹೇಳಿದರು.
ಜವಾಬ್ದಾರಿಯಿಂದ ನಡೆದುಕೊಳ್ಳುವ ಕೆಲಸ ಮಾಡಬೇಕು. ವೈಯಕ್ತಿಕ ಪ್ರತಿಷ್ಠೆ ತೋರಿಸಿ ರಾಜಕೀಯ ಬೆರೆಸಿ ಇಂತಹ ಕೆಲಸ ಮಾಡುತ್ತಿದ್ದಾರೆ. ನೀವು ಜೀವಮಾನದಲ್ಲಿ ಇಂತಹ ಒಂದು ಕಾರ್ಯಕ್ರಮ ಮಾಡಿ., ನಿಮ್ಮ ಪಕ್ಷದಲ್ಲಿ ಹತ್ತಾರು ಸಿಎಂಗಳಿದ್ದಾರೆ. ನಿಮ್ಮ ಜೀವನದಲ್ಲಿ ಇಂತಹ ಒಂದು ಕಾರ್ಯಕ್ರಮ ಮಾಡಿ ತೋರಿಸಿ. ಕರ್ನಾಟಕಕ್ಕೂ ಅವಮಾನ ಮಾಡಬೇಡಿ ಎಂದರು.


