ತುಮಕೂರು: ವ್ಯಕ್ತಿ ಒಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ತುಮಕೂರಿನ ಶಿರಾಗೇಟ್ ಎಚ್.ಎಂ.ಎಸ್ ಶಾಲೆ ಬಳಿ ನಡೆದಿದೆ. ಗ್ಯಾಸ್ ವಿಜಯ್ ಮೃತ ವ್ಯಕ್ತಿಯಾಗಿದ್ದಾರೆ. ಕೌಟುಂಬಿಕ ಕಲಹದಿಂದ ವ್ಯಕ್ತಿ ಈ ರೀತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ತುಮಕೂರಿನ ಅರಳಿಮರಪಾಳ್ಯದ ನಿವಾಸಿಯಾಗಿದ್ದಾರೆ. ಆಟೋ ಚಾಲಕನಾಗಿದ್ದ ವಿಜಯ್ ಶವದ ಪಕ್ಕ ವಿಷದ ಬಾಟಲು ಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ತುಮಕೂರು ನಗರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ ಅಲ್ಲದೆ ಈ ಸಂಬಂಧಪಟ್ಟ ಪ್ರಕರಣ ದಾಖಲಿಸಿಕೊಂಡಿದ್ದಾರೆ.


