ರಾಮನಗರ: ನಾನು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತೇನೆ ಎನ್ನುವುದು ಶುದ್ಧ ಸುಳ್ಳು. ಉದ್ದೇಶಪೂರ್ವಕವಾಗಿಯೇ ಈ ರೀತಿ ವದಂತಿ ಹಬ್ಬಿಸಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಯೋಗೇಶ್ವರ್ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂಬ ಬಗ್ಗೆ ಹರಡಿರುವ ಸುದ್ದಿಯ ಬಗ್ಗೆ ಮಾತನಾಡಿದ ಅವರು, ಬಿಜೆಪಿ ನನಗೆ ವಿಧಾನ ಪರಿಷತ್ ಸ್ಥಾನದ ಜೊತೆಗೆ ಹಿಂದಿನ ಸರ್ಕಾರದಲ್ಲಿ ಸಚಿವ ಸ್ಥಾನವನ್ನೂ ನೀಡಿದೆ. ಮುಂದೆಯೂ ಅವಕಾಶ ಸಿಗಲಿದೆ. ಆದಾಗ್ಯೂ ಯಾವುದೇ ಹುದ್ದೆಗೆ ಅಪೇಕ್ಷೆ ಪಡದೇ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಮುಂದಿನ ಚುನಾವಣೆಗಳಲ್ಲೂ ಬಿಜೆಪಿ ಅಭ್ಯರ್ಥಿಯಾಗಿಯೇ ಕಣಕ್ಕೆ ಇಳಿಯುತ್ತೇನೆ ಎಂದು ಹೇಳಿದರು.
ಪ್ರತಿ ಆರು ತಿಂಗಳಿಗೆ ಒಮ್ಮೆ ನಾನು ಕಾಂಗ್ರೆಸ್ ಸೇರುತ್ತೇನೆ ಎಂದು ವದಂತಿ ಹಬ್ಬಿಸಲಾಗುತ್ತಿದೆ. ಇದರ ಹಿಂದೆ ಯಾವ ಉದ್ದೇಶ ಇದೆಯೋ ಗೊತ್ತಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700