ತಮಿಳುನಾಡು ರಸ್ತೆ ಸಾರಿಗೆ ಸಂಸ್ಥೆಯ ಒಡೆತನದ ಬಸ್ ಗಳ ಮೇಲೆ ಬೆಂಗಳೂರಿನಲ್ಲಿ ಕಲ್ಲು ತೂರಾಟ ನಡೆಸಿದ್ದ ಆರೋಪಿಗಳನ್ನು ಕರ್ನಾಟಕ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ರಾಜ್ಯ ರಾಜಧಾನಿಯ ಚಾಮರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಸ್ಯಾಟಲೈಟ್ ಬಸ್ ಟರ್ಮಿನಲ್ ಬಳಿ ಸೋಮವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ.
ಈ ಸಂಬಂಧ ಬಸ್ ಚಾಲಕ ಗುಣಶೇಖರನ್ ದೂರು ದಾಖಲಿಸಿದ್ದರು. ದುಷ್ಕರ್ಮಿಗಳು ಬಸ್ಗಳ ಗಾಜುಗಳಿಗೆ ಹಾನಿ ಮಾಡಿದ್ದಾರೆ. ಘಟನೆ ನಡೆದಾಗ ಭಾರತ್ ಪೆಟ್ರೋಲ್ ಬಂಕ್ ಬಳಿ ಬಸ್ ಗಳು ನಿಂತಿದ್ದವು.
ಕಿಡಿಗೇಡಿಗಳ ಪತ್ತೆಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದು, ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ನಿನ್ನೆ ಬೆಂಗಳೂರು ನಗರದಲ್ಲಿ ನಡೆದ ಖಾಸಗಿ ಸಾರಿಗೆ ಸಂಸ್ಥೆಗಳ ಬಂದ್ ಹಿಂಪಡೆದ ಬೆನ್ನಲ್ಲೇ ಈ ಘಟನೆ ನಡೆದಿದೆ.


