ಬೆಂಗಳೂರು: ಪಕ್ಷದೊಳಗಿನ ಆಂತರಿಕ ಕಲಹದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭ್ರಮನಿರಸನಗೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ತಿಳಿಸಿದರು.
ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯು ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಾನು 30 ವರ್ಷಗಳಿಂದ ರಾಜಕಾರಣದಲ್ಲಿದ್ದೇನೆ. ಆಡಳಿತಕ್ಕೆ ಬಂದು 3 ತಿಂಗಳಲ್ಲಿ ಇಷ್ಟು ಜನವಿರೋಧಿ ಸರಕಾರವನ್ನು ಕರ್ನಾಟಕ ಮಾತ್ರವಲ್ಲದೆ ದೇಶದ ಯಾವುದೇ ರಾಜ್ಯದಲ್ಲಿ ನಾನು ಕಂಡಿಲ್ಲ ಎಂದರು.
‘ಅಂತೂ ಇಂತೂ ಕರ್ನಾಟಕದಲ್ಲಿ ಅತಿ ಶೀಘ್ರವಾಗಿ ಅವರ ಆಂತರಿಕ ಗೊಂದಲಗಳಿಂದಲೇ ಆಡಳಿತಕ್ಕೆ ಇತಿಶ್ರೀ ಆಗಲಿದೆ ಎಂಬ ಬಲವಾದ ನಂಬಿಕೆ ನನ್ನದು’ ಎಂದು ನುಡಿದರು.


