ಬೆಂಗಳೂರು: ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಜೆಡಿಎಸ್ ನಾಯಕ ಹೆಚ್.ಡಿ.ರೇವಣ್ಣ, ದೇವೇಗೌಡರು, ಕುಮಾರಸ್ವಾಮಿ, ಇಬ್ರಾಹಿಂ ತೀರ್ಮಾನಕ್ಕೆ ತಾನು ಬದ್ಧನಾಗಿರೋದಾಗಿ ತಿಳಿಸಿದ್ದಾರೆ.
ಕೋಮುವಾದಿಗಳನ್ನು ದೂರ ಇಡಬೇಕು ಅಂತಾ ಹೇಳುತ್ತಾರೆ. ತುಮಕೂರಿನಲ್ಲಿ ಅವರ ಜೊತೆ ಸೇರಿ ದೇವೇಗೌಡರನ್ನು ಸೋಲಿಸಿದರು. ದೇವೇಗೌಡರು ತುಮಕೂರು ಲೋಕಸಭಾ ಕ್ಷೇತ್ರವನ್ನು ಕೇಳಿರಲಿಲ್ಲ. ದೇವೇಗೌಡರು ಮೈಸೂರು, ಮಂಡ್ಯ ಕ್ಷೇತ್ರಗಳನ್ನು ಕೇಳಿದ್ದರು. ದೇವೇಗೌಡರನ್ನು ತುಮಕೂರಿನಲ್ಲಿ ನಿಲ್ಲಿಸಿ ಸೋಲಿಸಿದರು ಎಂದು ರೇವಣ್ಣ ಕಾಂಗ್ರೆಸ್ ವಿರುದ್ಧ ಆರೋಪ ಮಾಡಿದರು.
ದೇವೇಗೌಡರಿಗೆ ಶಕ್ತಿ ಇಲ್ಲ ಅಂತಾ ಇಂಡಿಯಾ ಮೈತ್ರಿಕೂಟ ಸಭೆಗೆ ಕರೆದಿಲ್ಲ ಎಂದು ಇದೇ ವೇಳೆ ಇಂಡಿಯಾ ಮೈತ್ರಿಕೂಟದ ವಿರುದ್ಧ ಅವರು ಅಸಮಾಧಾನ ವ್ಯಕ್ತಪಡಿಸಿದರು.


