ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಬೆಂಗಳೂರು ಪ್ಲೇಟ್ ಲೆಟ್ ಕೊರತೆಯನ್ನು ಎದುರಿಸುತ್ತಿದೆ.
ಕಳೆದ ಹಲವು ದಿನಗಳಿಂದ ನಿತ್ಯ ಡೆಂಗ್ಯೂ ಪ್ರಕರಣಗಳು ಅನಿರೀಕ್ಷಿತವಾಗಿ ಹೆಚ್ಚಾಗುತ್ತಿದ್ದು ಜನಸಾಮಾನ್ಯರಲ್ಲಿ ಆತಂಕ ಮೂಡಿಸಿದೆ. ಡೆಂಗ್ಯೂ ಹೆಚ್ಚಾದಂತೆ ನಗರದಲ್ಲಿ ಪ್ಲೇಟ್ ಲೆಟ್ ಗೆ ಬೇಡಿಕೆ ಹೆಚ್ಚಾಗುತ್ತಿದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಹಲವು ರಕ್ತನಿಧಿಗಳು ರಕ್ತದಾನ ಶಿಬಿರಗಳನ್ನು ಆಯೋಜಿಸುತ್ತಿವೆ.


