ಶಿಕ್ಷಕ ವೃತ್ತಿ ಬಹಳ ಶ್ರೇಷ್ಠ. ಜಾತಿ, ಭಾಷೆ ಹಾಗೂ ಧರ್ಮದ ತಾರತಮ್ಯಗಳನ್ನು ಮೀರಿ ಮಕ್ಕಳಿಗೆ ಸಂಸ್ಕಾರಯುತ ಮತ್ತು ಜ್ಞಾನಾಧಾರಿತ ಶಿಕ್ಷಣವನ್ನು ಧಾರೆಯೆರೆಯುವವರೇ ನಿಜವಾದ ಶಿಕ್ಷಕರು ಎಂದು ತುಮಕೂರು ವಿಶ್ವವಿದ್ಯಾಲಯದ ಮಾಜಿ ಕುಲ ಸಚಿವ ಪ್ರೊ. ಕೆ. ಶಿವಚಿತ್ತಪ್ಪ ಅಭಿಪ್ರಾಯಪಟ್ಟರು.
ಕರ್ನಾಟಕ ರಾಜ್ಯ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟ ಹಾಗೂ ರೇವಾ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ರೇವಾ ಕಾಲೇಜಿನಲ್ಲಿ ಆಯೋಜಿಸಿದ್ದ ಗುರುನಮನ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.


