ಬೆಂಗಳೂರು ನಗರದ ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿರುವ ನೆಪ್ರೋ ಯುರಾಲಜಿ ಸಂಸ್ಥೆಯಲ್ಲಿ 5 ರೋಗಿಗಳು ಕೋಮಾಗೆ ಹೋಗಿದ್ದರು. ಈ ಮಾಹಿತಿಯನ್ನು ನೆಪ್ರೋ ಯುರಾಲಜಿ ಸಂಸ್ಥೆಯ ಪ್ರಭಾರಿ ನಿರ್ದೇಶಕ ಡಾ. ಕೇಶವ ಮೂರ್ತಿ ಮುಚ್ಚಿಟ್ಟಿದ್ದರು. ಈ ಬಗ್ಗೆ ಡಾ. ಶಂಕರ್ ಗುಹಾ ಹಾಗೂ ಮಾಜಿ ಎಂಎಲ್‌ಸಿ ಪಿ. ಆರ್ ರಮೇಶ್ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗಿತ್ತು.
ಇದಕ್ಕೆ ಸಂಬಂಧಪಟ್ಟಂತೆ ಇದೀಗ ಡಾ. ಕೇಶವ ಮೂರ್ತಿ ವಿರುದ್ಧ ತನಿಖೆ ನಡೆಸುವಂತೆ ಖುದ್ದು ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.


