ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಾವೇರಿ ಆಸ್ಪತ್ರೆಯು ನಗರದಲ್ಲಿ 15 ಆಂಬುಲೆನ್ಸ್ ಗಳಿಗೆ ಚಾಲನೆ ನೀಡಿದ್ದು, ತುರ್ತು ಕರೆ ಸ್ವೀಕರಿಸಿದ ಕೆಲನಿಮಿಷಗಳಲ್ಲಿ ಆಂಬುಲೆನ್ಸ್ ಸ್ಥಳದಲ್ಲಿ ಇರುವುದಾಗಿ ತಿಳಿಸಿದೆ.
ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಆಸ್ಪತ್ರೆಯ ಡಾ.ಕೃಷ್ಣ ಚೈತನ್ಯ, ತುರ್ತು ಕರೆ ಸ್ವೀಕರಿಸಿದ 120 ಸೆಕೆಂಡ್ ಗಳಲ್ಲಿ ಸ್ಥಳಕ್ಕೆ ಆಂಬುಲೆನ್ಸ್ ಕಳಿಸಲು ಕ್ರಮವಹಿಸಲಾಗುತ್ತದೆ. ಎಲ್ಲಾ ಪ್ರಮುಖ ಸ್ಥಳಗಳಲ್ಲಿ ಆಂಬುಲೆನ್ಸ್ ಗಳು ಕಾರ್ಯಾಚರಣೆ ಮಾಡಲಿವೆ.