ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತಿದ್ದು, ಕೂಡಲೇ ಲಸಿಕೆ ಹಾಕುವ ಕೆಲಸ ಪ್ರಾರಂಭ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಲುಬಾಯಿ ಜ್ವರ ರೋಗಕ್ಕೂ ಲಸಿಕೆ ಹಾಕಬೇಕು ಎಂದು ಹೇಳಿದರು.
ಗೊಬ್ಬರವನ್ನು ಎಂ. ಆರ್. ಪಿ ದರಕ್ಕಿಂತ ಹೆಚ್ಚು ದರಕ್ಕೆ ಮಾರಾಟ ಮಾಡಲು ಕಡಿವಾಣ ಹಾಕಬೇಕು. ಒಟ್ಟಾರೆ ಅಧಿಕಾರಿಗಳ ವೈಫಲ್ಯದಿಂದ ಜನರ ನಿರೀಕ್ಷೆ ಹುಸಿಯಾಗಬಾರದು. ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವಿರಿ ಎಂಬ ವಿಶ್ವಾಸ ನನಗಿದೆ ಎಂದರು.


