ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿಗಳು ಮತ್ತು ಮಾಧ್ಯಮ ಸಲಹೆಗಾರರ ನೇಮಕವನ್ನು ಪ್ರಶ್ನಿಸಿ ಬೆಂಗಳೂರು ಮೂಲದ ವಕೀಲರೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠವು ಸಿಎಂ ಸಲಹೆಗಾರರ ನೇಮಕಕ್ಕೆ ನಿಷೇಧ ಎಲ್ಲಿದೆ ಎಂಬುದನ್ನು ತೋರಿಸಿ ಎಂದು ಪ್ರಶ್ನಿಸಿತು. ಅರ್ಜಿದಾರರ ಉತ್ತರಕ್ಕೆ ಸಂತುಷ್ಟಗೊಳ್ಳದ ನ್ಯಾಯಾಲಯ ಅರ್ಜಿ ವಜಾಗೊಳಿಸಿತು.


