5 ಕೋಟಿ ವಂಚನೆ ಆರೋಪದಡಿಯಲ್ಲಿ ಸಿಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿರುವ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ, ದಿಢೀರ್ ಎಂದು ಕುಸಿದು ಬಿದ್ದಿದ್ದಾರೆ. ಮಹಿಳಾ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿಗೆ ವಿಚಾರಣೆಗೆ ಎಂದು ಕರೆದುಕೊಂಡು ಬರುವ ಸಂದರ್ಭದಲ್ಲಿ, ಕಚೇರಿಯ ಮುಖ್ಯದ್ವಾರದ ಬಳಿ ಚೈತ್ರಾ ಕುಂದಾಪುರ ಕುಸಿದು ಬಿದ್ದಿದ್ದಾರೆ.
ಚೈತ್ರಾ ಕುಂದಾಪುರಳನ್ನ ತಕ್ಷಣವೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


