ತುಮಕೂರು ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಇಂದು ಜಿಲ್ಲಾಡಳಿತದ ವತಿಯಿಂದ ಸಂವಿಧಾನ ಪೀಠಿಕೆ ಓದುವ ಬೃಹತ್ ಸಾಮೂಹಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಜಿಲ್ಲಾಧಿಕಾರಿ ಕೆ.ಶ್ರೀನಿವಾಸ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಾವಿರಾರು ಶಾಲಾ ಮಕ್ಕಳು ಇದರಲ್ಲಿ ಭಾಗವಹಿಸಿದ್ದರು.
ಈ ವೇಳೆ ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ಓದುವ ಮೂಲಕ ಕಾರ್ಯಕ್ರಮವನ್ನು ಮುಂದುವರಿಸಿದರು.


