ಬೆಂಗಳೂರು: ನಾನು ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 165 ಭರವಸೆಗಳಲ್ಲಿ 158 ಭರವಸೆ ಈಡೇರಿಸಿದ್ದೇನೆ. ಈ ಬಾರಿಯೂ 5 ಗ್ಯಾರಂಟಿಗಳಲ್ಲಿ 4 ಗ್ಯಾರಂಟಿ ಜಾರಿ ಮಾಡಿದ್ದೇವೆ.
ಮುಂದಿನ ವರ್ಷ ಜನವರಿಯಲ್ಲಿ 5ನೇ ಗ್ಯಾರಂಟಿ ಜಾರಿ ಮಾಡುತ್ತೇವೆ. ಸಾಮಾಜಿಕ, ಆರ್ಥಿಕವಾಗಿ ದುರ್ಬಲ ಇದ್ದವರಿಗೆ ಶಕ್ತಿ ತುಂಬಬೇಕಿದೆ. ಗ್ಯಾರಂಟಿ ಜಾರಿ ಮಾಡಲು ಆಗಲ್ಲ ಎಂದು ಅಪಹಾಸ್ಯ ಮಾಡಿದ್ದರು. ರಾಜ್ಯ ದಿವಾಳಿ ಆಗುತ್ತೆ ಎಂದು ಅಪಹಾಸ್ಯ ಮಾಡಿದ್ದರು ಎಂದರು.


