nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026
    Facebook Twitter Instagram
    ಟ್ರೆಂಡಿಂಗ್
    • ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ
    • LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!
    • ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ
    • ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ
    • ಹಂಪಲಾಪುರ: ಭೂಮಿ ಹಕ್ಕಿಗಾಗಿ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ
    • ಗುಬ್ಬಿ: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಬೆಸ್ಕಾಂ ಕಚೇರಿ ಮುಂದೆ ರೈತರಿಂದ ಪ್ರತಿಭಟನೆ
    • ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
    • ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಏಕತೆ ಸಾರಿದ ಮಹಾನ್ ಗ್ರಂಥ ಭಾರತ ಸಂವಿಧಾನ: ಶಾಸಕ ಆಸೀಫ್ (ರಾಜು) ಸೇಠ್
    ರಾಷ್ಟ್ರೀಯ ಸುದ್ದಿ September 16, 2023

    ಏಕತೆ ಸಾರಿದ ಮಹಾನ್ ಗ್ರಂಥ ಭಾರತ ಸಂವಿಧಾನ: ಶಾಸಕ ಆಸೀಫ್ (ರಾಜು) ಸೇಠ್

    By adminSeptember 16, 2023No Comments2 Mins Read
    indian constitution

    ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ, ವಿಚಾರ, ಅಭಿವ್ಯಕ್ತಿ, ವಿಶ್ವಾಸ, ಧರ್ಮಶ್ರದ್ಧೆ, ಸಮಾನತೆ ಹಾಗೂ ಏಕತೆ ಸಾರಿದ ಮಹಾನ್ ಗ್ರಂಥ ಭಾರತ ಸಂವಿಧಾನ ಎಂದು ಬೆಳಗಾವಿ ಉತ್ತರ ವಿಧಾನ ಸಭಾ ಮತ ಕ್ಷೇತ್ರದ ಶಾಸಕ ಆಸೀಫ್ (ರಾಜು) ಸೇಠ್ ಅವರು ತಿಳಿಸಿದರು.

    ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಶುಕ್ರವಾರ (ಜು.15) ರಾಜ್ಯಾದ್ಯಂತ ಏಕಕಾಲದಲ್ಲಿ ನಡೆದ ಸಂವಿಧಾನ ಪೀಠಿಕೆ ವಾಚನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


    Provided by
    Provided by

    ಭ್ರಾತೃತ್ವದ ಉದಾತ್ತ ಚಿಂತನೆಗಳನ್ನು ಸಾರುವ ನಮ್ಮ ಸಂವಿಧಾನ ನಮ್ಮ ಹೆಮ್ಮೆ. ಸಂವಿಧಾನವನ್ನು ರಚಿಸಿದ ಅಂಬೇಡ್ಕರ್ ಅವರನ್ನು ನೆನಪಿಸಿಕೊಳ್ಳುವ ದಿನವಿದು, ಅವರ ಆಶಯಗಳನ್ನು ಪ್ರತಿಯೊಬ್ಬರು ಅನುಸರಿಸಬೇಕು ಎಂದು ಹೇಳಿದರು.

    ವಿವಿಧ ಇಲಾಖೆಯ ವಸತಿ ನಿಲಯಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಈ ಸಂವಿಧಾನ ಪೀಠಿಕೆ ವಾಚನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಸಂತಸದ ವಿಷಯ. ಸಂವಿಧಾನ ಸರ್ವರಿಗೂ ಶಿಕ್ಷಣ, ಸಮಾನತೆಯ ಹಕ್ಕು ಕಲ್ಪಿಸಿದೆ. ಯಾವುದೇ ದೇಶದಲ್ಲಿಯೂ ಕೂಡಾ ಭಾರತ ದೇಶದ ನಾಗರಿಕರಿಗೆ ಇರುವಷ್ಟು ಸ್ವಾತಂತ್ರ್ಯವಿಲ್ಲ. ಭಾರತ ದೇಶ ವಿಶ್ವದಲ್ಲೇ ಮಾದರಿ ರಾಷ್ಟ್ರ ಎಂದು ಶಾಸಕ ಆಸೀಫ್ ರಾಜು ಸೇಠ್ ಅವರು ತಿಳಿಸಿದರು.

    ಇದಕ್ಕೂ ಮೊದಲು ಮಾತನಾಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಭಾರತದ ಸಂವಿಧಾನ ಪ್ರಸ್ತಾವನೆ ಜೀವನದ ನೀತಿ ಪಾಠ, ಮೌಲ್ಯಗಳ ಎತ್ತಿ ಹಿಡಿದು ಕಾರ್ಯನಿರ್ವಹಿಸಲು ನೆರವಾಗುತ್ತದೆ. ಸರ್ಕಾರದ ವಿವಿಧ ಇಲಾಖೆಯ ಕಾರ್ಯಕ್ರಮಗಳಲ್ಲಿ ಜಿಲ್ಲಾ ಮಟ್ಟದಿಂದ, ತಾಲೂಕು, ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಸಂವಿಧಾನ ಪೀಠಿಕೆ ಚಿತ್ರಣ ಇಡಲಾಗುವುದು ಎಂದು ಹೇಳಿದರು.

    ಸಂವಿಧಾನ ಪೀಠಿಕೆ ವಾಚನ ಸಂವಿಧಾನ ಪ್ರಸ್ತಾವನೆ:

    ಭಾರತದ ಜನಗಳಾದ ನಾವು ಭಾರತವನ್ನು ಒಂದು ಸಾರ್ವಭೌಮ ಸಮಾಜವಾದೀ ಸರ್ವಧರ್ಮ ಸಮಭಾವದ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ರಚಿಸಲು ಮತ್ತು ಅದರ ಸಮಸ್ತ ನಾಗರಿಕರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ; ವಿಚಾರ, ಅಭಿವ್ಯಕ್ತಿ, ವಿಶ್ವಾಸ, ಧರ್ಮಶ್ರದ್ಧೆ ಮತ್ತು ಉಪಾಸನಾ ಸ್ವಾತಂತ್ರ್ಯ ; ಸ್ಥಾನಮಾನ ಹಾಗೂ ಅವಕಾಶ ಸಮಾನತೆ ದೊರೆಯುವಂತೆ ಮಾಡಲು ಮತ್ತು ವ್ಯಕ್ತಿ ಗೌರವವನ್ನು ರಾಷ್ಟ್ರದ ಏಕತೆಯನ್ನು ಹಾಗೂ ಅಖಂಡತೆಯನ್ನು ಸುನಿಶ್ಚಿತಗೊಳಿಸಿ ಅವರಲ್ಲಿ ಭ್ರಾತೃಭಾವನೆಯನ್ನು ವೃದ್ಧಿಗೊಳಿಸಲು ಶ್ರದ್ಧಾಪೂರ್ವಕ ಸಂಕಲ್ಪ ಮಾಡಿದವರಾಗಿ; ನಮ್ಮ ಸಂವಿಧಾನ ಸಭೆಯಲ್ಲಿ 1949ನೆಯ ಇಸವಿ ನವೆಂಬರ್ ತಿಂಗಳ ಇಪ್ಪತ್ತಾರನೆಯ ತಾರೀಖಾದ ಈ ದಿವಸ, ಈ ಮೂಲಕ ಈ ಸಂವಿಧಾನವನ್ನು ಅಂಗೀಕರಿಸಿ, ಅಧಿನಿಯಮಿಸಿ ಅರ್ಪಿಸಿಕೊಂಡಿದ್ದೇವೆ.

    admin
    • Website

    Related Posts

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    Comments are closed.

    Our Picks

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    ಬೆಂಗಳೂರು: ದೇಶದಲ್ಲಿ ಉಂಟಾಗಿರುವ ಅಡುಗೆ ಅನಿಲ (LPG) ಸಿಲಿಂಡರ್‌ಗಳ ತೀವ್ರ ಕೊರತೆ ಮತ್ತು ಬೆಲೆ ಏರಿಕೆ ಕುರಿತು ಕೇಂದ್ರ ಸರ್ಕಾರ…

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026

    ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ

    March 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.