nammatumakuru

    Subscribe to Updates

    Get the latest creative news from FooBar about art, design and business.

    What's Hot

    ನ.28 ರಂದು ಪತ್ರಿಕಾ ವಿತರಕರ ಕ್ರೀಡಾಕೂಟದ ಬಹುಮಾನ ವಿತರಣೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

    November 27, 2025

    ಡಿ.6–7ರಂದು ಶ್ರೀ ಅಯ್ಯಪ್ಪಸ್ವಾಮಿಯ ಚರಬಿಂಬ ಪ್ರತಿಷ್ಠಾಪನಾ ಮಹೋತ್ಸವ

    November 27, 2025

    ಮಹಿಳೆಗೆ ಚಾಕು ತೋರಿಸಿ ಚಿನ್ನದ ಸರ ಕಳವು!

    November 27, 2025
    Facebook Twitter Instagram
    ಟ್ರೆಂಡಿಂಗ್
    • ನ.28 ರಂದು ಪತ್ರಿಕಾ ವಿತರಕರ ಕ್ರೀಡಾಕೂಟದ ಬಹುಮಾನ ವಿತರಣೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ
    • ಡಿ.6–7ರಂದು ಶ್ರೀ ಅಯ್ಯಪ್ಪಸ್ವಾಮಿಯ ಚರಬಿಂಬ ಪ್ರತಿಷ್ಠಾಪನಾ ಮಹೋತ್ಸವ
    • ಮಹಿಳೆಗೆ ಚಾಕು ತೋರಿಸಿ ಚಿನ್ನದ ಸರ ಕಳವು!
    • ಡಕಾಯಿತಿಗೆ ಸಂಚು: ಐವರ ಬಂಧನ
    • ಪದವೀಧರರ ಮತದಾರರ ಕರಡು ಪಟ್ಟಿ ಪ್ರಕಟ
    • ನ.30 ರಂದು ಅಮೋಘ ಸಂಗೀತ ಕಛೇರಿ
    • ಹುಳಿಯಾರು: ಘನತ್ಯಾಜ್ಯ ವಿಲೇವಾರಿ ಘಟಕ ಅವಕಾಶ ಕೊಡುವುದಿಲ್ಲ:  ಗ್ರಾಮಸ್ಥರಿಂದ ವಿರೋಧ
    • ಖಾಸಗಿ ಆಸ್ಪತ್ರೆಗಳೊಂದಿಗೆ ಶಾಮೀಲಾದರೆ ಕ್ರಮ: ಸರ್ಕಾರಿ ವೈದ್ಯರು, ಸಿಬ್ಬಂದಿಗೆ ಶಾಸಕ ಎಚ್.ವಿ.ವೆಂಕಟೇಶ್ ಎಚ್ಚರಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯ ಸರ್ಕಾರ ಬರಗಾಲ ಘೋಷಣೆ ವಿಳಂಬ: ಕಾರಣ ನೀಡಿದ ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ September 16, 2023

    ರಾಜ್ಯ ಸರ್ಕಾರ ಬರಗಾಲ ಘೋಷಣೆ ವಿಳಂಬ: ಕಾರಣ ನೀಡಿದ ಸಿಎಂ ಸಿದ್ದರಾಮಯ್ಯ

    By adminSeptember 16, 2023No Comments2 Mins Read
    siddharamayya 3

    ಬರಗಾಲದ ಘೋಷಣೆ ಮತ್ತು ಪರಿಹಾರಕ್ಕೆ ಸಂಬಂಧಿಸಿದ ಕೇಂದ್ರ ಸರ್ಕಾರದ ಬರನಿರ್ವಹಣೆ ಕೈಪಿಡಿ 2020 ಮಾನದಂಡಗಳಲ್ಲಿನ ಸಮಸ್ಯೆಗಳ ಕಾರಣದಿಂದಾಗಿಯೇ ಬರಗಾಲ ಘೋಷಣೆ ವಿಳಂಬವಾಗಿದೆ. ಈ ಮಾನದಂಡಗಳನ್ನು ಬದಲಾವಣೆ ಮಾಡದಿದ್ದರೆ ಬರಪೀಡಿತ ಪ್ರದೇಶದದಲ್ಲಿ ಪರಿಹಾರ ಕಾರ್ಯಗಳನ್ನು ನಡೆಸಿ ನೊಂದ ಜನರಿಗೆ ನೆರವಾಗಲು ಸಾಧ್ಯವಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ.

    ಪತ್ರಿಕಾ ಪ್ರಕಟಣೆ ಮೂಲಕ ಕಾರಣ ನೀಡಿರುವ ಅವರು, ಬರ ಘೋಷಣೆಗೆ ಅಗತ್ಯವಾಗಿರುವ ಮಾನದಂಡಗಳನ್ನು ಮರುಪರಿಶೀಲಿಸಬೇಕಾದ ಅನಿವಾರ್ಯತೆಯನ್ನು ವಿವರಿಸಿ ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರಿಗೆ ಹಿಂದೆಯೇ ಪತ್ರ ಬರೆದಿದ್ದರೂ ಕೇಂದ್ರ ಸರ್ಕಾರದಿಂದ ಇಲ್ಲಿಯ ವರೆಗೆ ಉತ್ತರ ಬಂದಿಲ್ಲ. ಮಾನದಂಡಗಳಲ್ಲಿನ ಬದಲಾವಣೆ ಕೇವಲ ಕರ್ನಾಟಕ ರಾಜ್ಯದ ದೃಷ್ಟಿಯಿಂದ ಮಾತ್ರವೇ ಅಲ್ಲ, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಒಕ್ಕೂಟವಾದ ಭಾರತ ಗಣರಾಜ್ಯದ ಹಿತದೃಷ್ಟಿಯಿಂದಲೂ ಅತ್ಯಗತ್ಯವಾಗಿರುತ್ತದೆ.


    Provided by
    Provided by

    ಬರ ಘೋಷಣೆಯ ಮಾನದಂಡಗಳ ಪರಿಷ್ಕರಣೆಗಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕಾಗಿರುವ ರಾಜ್ಯದ ಬಿಜೆಪಿ ನಾಯಕರು ಆ ಕೆಲಸವನ್ನು ಮಾಡದೆ ರಾಜ್ಯದ ಬರ ಪರಿಸ್ಥಿತಿಯ ರಾಜಕೀಯ ಲಾಭ ಪಡೆಯುವ ದುರುದ್ದೇಶದಿಂದ ಸರ್ಕಾರದ ವಿರುದ್ದ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ.

    ಕರ್ನಾಟಕವು ವೈವಿಧ್ಯಮಯವಾದ 14 ಕೃಷಿ-ಹವಾಮಾನ ವಲಯಗಳನ್ನು ಹೊಂದಿದ್ದು, ಪ್ರತಿಯೊಂದು ವಲಯವೂ ತನ್ನದೇ ಆದ ಸವಾಲುಗಳನ್ನು ಹೊಂದಿದೆ. ಪ್ರಸಕ್ತ ಇರುವ ಮಾನದಂಡಗಳು ಎಲ್ಲ ವಲಯಗಳಿಗೂ ಏಕರೂಪವಾಗಿದ್ದು, ಇದು ಬರ ಘೋಷಣೆಗೆ ಅಗತ್ಯವಾದ ಸೂಕ್ಷ್ಮಗಳು ಮತ್ತು ಬದಲಾವಣೆಗಳನ್ನು ಒಳಗೊಳ್ಳುವುದಿಲ್ಲ. ಹಾಗಾಗಿ, ವಲಯವಾರು ನಿರ್ದಿಷ್ಟವಾದ ಸೂಚ್ಯಂಕಗಳನ್ನು ಬರ ಘೋಷಣೆಗೆ ರೂಪಿಸುವುದು ಅಗತ್ಯವಾಗಿರುತ್ತದೆ.

    ಪ್ರಸಕ್ತ ಬರ ಘೋಷಣೆಯ ಮಾನದಂಡಗಳು ಹವಾಮಾನ ಶಾಸ್ತ್ರೀಯ, ಕೃಷಿ ಹಾಗೂ ಜಲಶಾಸ್ತ್ರೀಯ ಬರಗಳ ಸೂಚ್ಯಂಕಗಳನ್ನು ತನ್ನ ಮಾನದಂಡಗಳಲ್ಲಿ ಕ್ರೋಢೀಕರಿಸಿಕೊಂಡಿದೆ. ಆದರೆ, ಸದಾಕಾಲವೂ ಇದು ಅನ್ವಯ ಯೋಗ್ಯವೆಂದೇನೂ ಅಲ್ಲ. ಹವಾಮಾನ ಶಾಸ್ತ್ರೀಯ ಬರವನ್ನು ಪರಿಗಣಿಸಿಯೇ ನೋಡುವುದಾದರೆ, ಮುಂಗಾರಿನಲ್ಲಿ ಆರಂಭದಲ್ಲಿ ಮಳೆ ಕೊರತೆ ಇದ್ದದ್ದು ಆನಂತರ ಪ್ರಬಲ ಮಾರುತಗಳ ಪರಿಣಾಮ ಸುದಾರಿಸಬಹುದು.

    ಇತ್ತೀಚಿನ ವರ್ಷಗಳಲ್ಲಿ ಇದು ಹೆಚ್ಚು ಘಟಿಸಿದೆ. ಆಗಸ್ಟ್-ಸೆಪ್ಟೆಂಬರ್ ಅವಧಿಯಲ್ಲಿ ಮಳೆ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ, ಮುಂಗಾರು ಆರಂಭದಲ್ಲಿ ಮಳೆ ಕೊರತೆಯ ಕಾರಣಕ್ಕೆ ಬಿತ್ತನೆ ಪ್ರಮಾಣ ಇಳಿಕೆಯಾಗಿರುತ್ತದೆ. ಪರಿಣಾಮ ಬೆಳೆಯಲ್ಲಿ ಕೊರತೆಯುಂಟಾಗಿ ಕೃಷಿ ಆಧರಿತ ಬರದ ಸನ್ನಿವೇಶ ಉದ್ಭವಿಸುತ್ತದೆ. ಅದರೆ, ಇದೇ ವೇಳೆ ಸುಧಾರಿಸಿದ ಮಳೆಯ ಮಾರುತಗಳಿಂದಾಗಿ ಹವಾಮಾನ ಮತ್ತು ಜಲಶಾಸ್ತ್ರೀಯ ಬರ ಕಾಣದೆ ಹೋಗಬಹುದು. ಈ ಸೂಕ್ಷ್ಮವನ್ನು ಬರ ಘೋಷಣೆಗೆ ಕಡ್ಡಾಯವಾಗಿರುವ ಮಾನದಂಡಗಳು ಒಳಗೊಳ್ಳಬೇಕಾಗಿದೆ.

    ಭಾರತೀಯ ಹವಾಮಾನ ಇಲಾಖೆಯು ದೇಶಾದ್ಯಂತ ಶೇ.10 ಮಳೆಯ ಕೊರತೆಯನ್ನೂ ಸಹ ಬರದ ವರ್ಷ ಎಂದು ತೀರ್ಮಾನಿಸಿ ಘೋಷಿಸುತ್ತದೆ. ಆದರೆ, ಮಾನದಂಡಗಳ ಪ್ರಕಾರ ರಾಜ್ಯಗಳು ಬರ ಘೋಷಣೆಯನ್ನು ಮಾಡಬೇಕಾದರೆ ಮಳೆಯ ವ್ಯತ್ಯಯ ಸೂಚ್ಯಂಕವು ಶೇ.60ಕ್ಕಿಂತ ಹೆಚ್ಚಿರಬೇಕು ಎನ್ನಲಾಗಿದೆ. ನಾವು ಈ ಎರಡರ ನಡುವಿನ ಅಂತರವನ್ನು ಗಣನೆಗೆ ತೆಗೆದುಕೊಳ್ಳಬೇಕಾಗಿದೆ. ಮಳೆಯ ವ್ಯತ್ಯಯ ಸೂಚ್ಯಂಕವು ಶೇ.20ರಿಂದ ಶೇ.59ರವರೆಗೆ ಇದ್ದರೂ ಅದು ಬರ ಘೋಷಣೆಗೆ ಅಗತ್ಯವಾದ ಕ್ರಿಯಾಕಾರಣ (ಟ್ರಿಗರ್) ಅಂಶವೆಂದು ಪರಿಗಣಿಸಬೇಕು.

    ಶುಷ್ಕ ಅಥವಾ ಒಣ ಹವೆಯ ವಿಚಾರದಲ್ಲಿಯೂ ಕೈಪಿಡಿಯಲ್ಲಿ ಕಠಿಣವಾದ ನಿಯಮಾವಳಿ ಇದೆ. ಬರ ಘೋಷಿಸಲು ಮೂರು ವಾರಗಳ ಒಣಹವೆಯನ್ನು ಸೂಚ್ಯಂಕವಾಗಿ ಪರಿಗಣಿಸಲಾಗಿದೆ. ವಿಪರ್ಯಾಸವೆಂದರೆ, ಎರಡು ಮೂರು ವಾರಗಳ ಒಣಹವೆ ಕೂಡ ಬೆಳೆಯ ಮೇಲೆ ಗಂಭೀರ ದುಷ್ಪರಿಣಾಮ ಉಂಟು ಮಾಡಿ ಸರಿಪಡಿಸಲಾಗದ ಬೆಳೆಹಾನಿಗೆ ಕಾರಣವಾಗುತ್ತದೆ. ಹಾಗಾಗಿ ಮಳೆ ಕುರಿತಾದ ಸೂಚ್ಯಂಕದಲ್ಲಿ ಒಣ ಹವೆಯ ಅವಧಿಯನ್ನು ಎರಡು ವಾರಗಳಿಗಿಂತ ಕಡಿಮೆ ಎಂದು ಪರಿಗಣಿಸಬೇಕು. ಬರ ಘೋಷಣೆಯ ವಿಳಂಬಕ್ಕೆ ಕಾರಣವಾಗುವ ಕೈಪಿಡಿಯಲ್ಲಿರುವ ಮತ್ತೊಂದು ಪ್ರಮುಖ ಮಾನದಂಡವೆಂದರೆ ಅದು ರಾಜ್ಯ ಸರ್ಕಾರವು ‘ಇನ್ನು ಯಾವುದೇ ಬಿತ್ತನೆ ಚಟುವಟಿಕೆ’ ನಡೆಯುವುದಿಲ್ಲ ಎಂದು ಬೆಳೆ ಹಂಗಾಮಿನ ವೇಳೆ ಕೇಂದ್ರ ಸರ್ಕಾರಕ್ಕೆ ಕಡ್ಡಾಯವಾಗಿ ಪ್ರಮಾಣಪತ್ರ ಸಲ್ಲಿಸಬೇಕಿರುವುದು. ಇದು ಇನ್ಪುಟ್ ಸಬ್ಸಿಡಿ ಪರಿಕಲ್ಪನೆಗೆ ವ್ಯತಿರಿಕ್ತವಾಗಿದೆ. ಇನ್ಪುಟ್ ಸಬ್ಸಿಡಿ ಪರಿಕಲ್ಪನೆಯು ತಕ್ಷಣದ ಪರಿಹಾರ ನೀಡುವ ಮೂಲಕ ಆರ್ಥಿಕ ಚಟುವಟಿಕೆಯನ್ನು ಪುನರಾರಂಭಿಸಬೇಕು ಎನ್ನುತ್ತದೆ. ಆದರೆ, ಮೇಲೆ ಹೇಳಿದ ಕೇಂದ್ರದ ನಿಯಮಾವಳಿಯಿಂದಾಗಿ ರಾಜ್ಯ ಸರ್ಕಾರವು ಬರ ಘೋಷಣೆ ಮಾಡಿ ತಕ್ಷಣ ಪರಿಹಾರಕ್ಕೆ ಮುಂದಾಗಲು ಸಾಧ್ಯವಾಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

    admin
    • Website

    Related Posts

    ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಭಾರತದ ಸಂವಿಧಾನ: ವೈ.ಡಿ.ರಾಜಣ್ಣ

    November 26, 2025

    ಕರ್ನಾಟಕ ರಣಧೀರರ ವೇದಿಕೆ: ಅದ್ಧೂರಿ ಕನ್ನಡ ರಾಜ್ಯೋತ್ಸವ, ತಾಯಿ ಭುವನೇಶ್ವರಿ ಹಬ್ಬ

    November 25, 2025

    ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    November 22, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನ.28 ರಂದು ಪತ್ರಿಕಾ ವಿತರಕರ ಕ್ರೀಡಾಕೂಟದ ಬಹುಮಾನ ವಿತರಣೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

    November 27, 2025

    ತುಮಕೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ, ತುಮಕೂರು ಜಿಲ್ಲಾ ದಿನಪತ್ರಿಕೆ ಹಂಚಿಕೆದಾರರ ಸಂಘ ಇವರ ವತಿಯಿಂದ ನ.28 ರಂದು…

    ಡಿ.6–7ರಂದು ಶ್ರೀ ಅಯ್ಯಪ್ಪಸ್ವಾಮಿಯ ಚರಬಿಂಬ ಪ್ರತಿಷ್ಠಾಪನಾ ಮಹೋತ್ಸವ

    November 27, 2025

    ಮಹಿಳೆಗೆ ಚಾಕು ತೋರಿಸಿ ಚಿನ್ನದ ಸರ ಕಳವು!

    November 27, 2025

    ಡಕಾಯಿತಿಗೆ ಸಂಚು: ಐವರ ಬಂಧನ

    November 27, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.