ಬೆಂಗಳೂರು : ಪುಟ್ಟೇನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ 19 ವರ್ಷದ ಯುವತಿ ಆತ್ಮಹತ್ಯೆ ಪ್ರಕರಣ ಸಂಬಂಧ ‘ಇನ್‌ಸ್ಟಾಗ್ರಾಂ’ ಸ್ನೇಹಿತ ಸೇರಿ ಮೂವರು ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ.
‘ಜೆ. ಪಿ. ನಗರ ಬಳಿಯ ಅಯೋಧ್ಯೆ ನಗರ ನಿವಾಸಿಯಾದ ಯುವತಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸಹೋದರಿ ದೂರು ನೀಡಿದ್ದಾರೆ.
ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಆರೋಪದಡಿ ಸ್ನೇಹಿತರಾದ ಅಬ್ರಾರ್ ಶೇಕ್, ಇರ್ಫಾನ್ ಶಾಹೀದ್, ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.


