ಬಿಬಿಎಂಪಿ ಹಂಚಿಕೊಂಡ ಅಂಕಿ ಅಂಶಗಳ ಪ್ರಕಾರ ಈ ವರ್ಷ ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ.
4,323 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ ಎಂದು ಮಾಹಿತಿ ನೀಡಿದೆ. ಜುಲೈ ತಿಂಗಳಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 1,629 ಪ್ರಕರಣಗಳು ದಾಖಲಾಗಿವೆ.
ಬೆಂಗಳೂರು ನಗರ ಪಾಲಿಕೆಯಿಂದ ಸೆ. 1ರಿಂದ ಸೆ. 8ರವರೆಗೆ 416 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. 2019 ರಲ್ಲಿ 44,863 ಡೆಂಗ್ಯೂ ಪ್ರಕರಣಗಳಿದ್ದರೆ, 2020ರಲ್ಲಿ 6,679 ಕ್ಕೆ ಇಳಿದಿದೆ ಎಂದು ಬಿಬಿಎಂಪಿ ಹೇಳಿದೆ.


