ಸೂರ್ಯನ ಮೇಲ್ಮೈ ಅಧ್ಯಯನಕ್ಕಾಗಿ ಭಾರತ ಕೈಗೊಂಡಿರುವ ಆದಿತ್ಯ ಎಲ್ 1 ಮಿಷನ್ ವೈಜ್ಞಾನಿಕ ಮಾಹಿತಿ ಸಂಗ್ರಹಿಸಲು ಆರಂಭಿಸಿದೆ ಎಂದು ಇಸ್ರೋ ತಿಳಿಸಿದೆ.
STEPS ಉಪಕರಣದ ಸಂವೇದಕಗಳು ಭೂಮಿಯಿಂದ 50,000km ಗಿಂತ ಹೆಚ್ಚಿನ ದೂರದಲ್ಲಿ ಸೂಪರ್-ಥರ್ಮಲ್ ಮತ್ತು ಶಕ್ತಿಯುತ ಅಯಾನುಗಳು ಮತ್ತು ಎಲೆಕ್ಟ್ರಾನ್ ಗಳನ್ನು ಅಳೆಯಲು ಪ್ರಾರಂಭಿಸಿವೆ. ಈ ಡೇಟಾವು ವಿಜ್ಞಾನಿಗಳಿಗೆ ಭೂಮಿಯ ಸುತ್ತಲಿನ ಕಣಗಳ ನಡವಳಿಕೆಯನ್ನು ವಿಶ್ಲೇಷಿಸಲು ಸಹಾಯ ಮಾಡುತ್ತದೆ ”ಎಂದು ಇಸ್ರೋ ವಿಜ್ಞಾನಿಗಳು ತಿಳಿಸಿದ್ದಾರೆ.
ಸೋಮವಾರ ಮಧ್ಯ ರಾತ್ರಿ ಆದಿತ್ಯ ಎಲ್1, ಟ್ರಾನ್ಸ್-ಲ್ಯಾಗ್ರೇಂಜ್ ಪಾಯಿಂಟ್ 1 ಇನ್ ಸರ್ಷನ್ ಕ್ರಿಯೆಯನ್ನು ಪೂರ್ಣಗೊಳಿಸಲಿದೆ.


