ಬೆಂಗಳೂರು: ಅಕ್ರಮವಾಗಿ ಇ-ಸಿಗರೇಟ್ ಸಾಗಿಸುತ್ತಿದ್ದ ಇಬ್ಬರು ಪ್ರಯಾಣಿಕರು ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಆರೋಪಿಗಳಿಂದ 15.9 ಲಕ್ಷ ರೂ. ಮೌಲ್ಯದ ಇ-ಸಿಗರೇಟ್ ವಶಕ್ಕೆ ಪಡೆಯಲಾಗಿದೆ.
ಮಲೇಷ್ಯಾದಿಂದ ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರ ಲಗ್ಗೇಜ್ ಗಳನ್ನು ಪರಿಶೀಲನೆ ಮಾಡುವಾಗ ಪತ್ತೆಯಾಗಿದೆ. 1,590 ಇ-ಸಿಗರೇಟ್ ಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.


