ಬೆಂಗಳೂರು: ಲಾರಿ ಬೈಕ್ ಡಿಕ್ಕಿಯಾಗಿ ವ್ಯಕ್ತಿ ಮೃತಪಟ್ಟಿರುವ ಘಟನೆ ವೈಟ್ ಫೀಲ್ಡ್ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶನಿವಾರ ರಾತ್ರಿ ಸ್ನೇಹಿತ ಸೈಯದ್ ಶೇಖ್ ಸದೀರ್ ಮಂಡಲ್ ಜೊತೆ ಬೈಕ್‌ನಲ್ಲಿ ಹೊರಟಿದ್ದಾಗ ಲಾರಿ, ಬೈಕ್ ಡಿಕ್ಕಿ ಹೊಡೆದಿತ್ತು. ತೀವ್ರ ಗಾಯಗೊಂಡಿದ್ದ ಸಾಹೀನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸೈಯದ್ ಅವರಿಗೂ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಳಿಸಿದರು.


