ತಮಿಳು ನಟ ಹಾಗೂ ಸಂಗೀತ ನಿರ್ದೇಶಕ ವಿಜಯ್ ಆಂಟೋನಿ ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪ್ಲಸ್ ಟು ವಿದ್ಯಾರ್ಥಿನಿ ಮೀರಾ (16) ಮೃತರು. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಕೂಡಲೇ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಪ್ರಾಣ ಉಳಿಸಲಾಗಲಿಲ್ಲ. ಮಾನಸಿಕ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.


