ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ಅಪಾಯಕಾರಿ ಬೈಕ್ ಸ್ಟಂಟ್ ಮಾಡಲು ಪ್ರಯತ್ನಿಸುತ್ತಿದ್ದಾಗ ಅಪಘಾತಕ್ಕೀಡಾದ ಜನಪ್ರಿಯ ಬೈಕ್ ಸವಾರ/ ಯೂಟ್ಯೂಬರ್ ಟಿಟಿಎಫ್ ವಾಸನ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಪಘಾತದಲ್ಲಿ 24 ವರ್ಷದ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಕಾಂಚೀಪುರಂನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಅವರ ಕೈ ಮುರಿದಿದ್ದು, ಮೊಣಕಾಲಿಗೂ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ.


