ನವದೆಹಲಿ: ಆಡಳಿತಾರೂಢ ಎನ್ ಡಿಎ, ಸಂಸತ್ತಿನಲ್ಲಿ ಮಹಿಳೆಯರಿಗೆ ಗಣನೀಯ ಪ್ರಮಾಣದ ಸ್ಥಾನಗಳನ್ನು ಮೀಸಲಿಡುವ ಮಹತ್ವದ ಮಸೂದೆಯನ್ನು ಮಂಡಿಸಿದೆ. ಇಂದು ನೂತನ ಸಂಸತ್ ಭವನದಲ್ಲಿ ಕಾನೂನು ಸಚಿವ ಅರ್ಜುನ್ ರಾಮ್ ಮೇಘ್ವಾಲ್ ಅವರು ಮಹಿಳೆಯರಿಗೆ ಶೇಖಡ 33ರಷ್ಟು ಮೀಸಲಾತಿ ನೀಡುವ ಮಹಿಳಾ ಮೀಸಲಾಯಿತ ಮಸೂದೆಯನ್ನು ಮಂಡಿಸಿದರು.
ಹೊಸ ಸಂಸತ್ ಭವನದಲ್ಲಿ ನಡೆದ ಎರಡನೇ ದಿನದ ಸಂಸತ್ ವಿಶೇಷ ಅಧಿವೇಶನ ನಾಳೆಗೆ ಮುಂದೂಡಲ್ಪಟ್ಟಿದೆ. ನಾಳೆ 11ಗಂಟೆಗೆ ಸಂಸತ್ ವಿಶೇಷ ಅಧಿವೇಶನ ನಡೆಯಲಿದ್ದು ನಿರೀಕ್ಷಿತ ಮಹಿಳಾ ಮೀಸಲಾತಿ ಮಸೂದೆಗೆ ನಾಳಿನ ಅಧಿವೇಶನದಲ್ಲಿ ಅಂಗೀಕಾರ ಸಿಗುವ ಸಾಧ್ಯತೆ ಇದೆ.


