ತುಮಕೂರು: ತುಮಕೂರು ನಗರದ ಜಿಲ್ಲಾ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನೂತನ ಡ್ರಾಮ ಕೇರ್ ಸೆಂಟರ್ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಇಂದು ಕಾರ್ಯ ಚಟುವಟಿಕೆಗೆ ಇಂದು ಅಧಿಕೃತವಾಗಿ ಚಾಲನೆ ನೀಡಿದರು.
ಸುಮಾರು 5 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ಟ್ರಾಮಾ ಕೇರ್ ಸೆಂಟರ್, ಸಾಕಷ್ಟು ರೋಗಿಗಳಿಗೆ ಅನುಕೂಲವಾಗಲಿದೆ ಬಹುತೇಕ ತುರ್ತು ಚಿಕಿತ್ಸೆಗಾಗಿ ಬೆಂಗಳೂರು ಕಡೆಗೆ ಹೋಗುತ್ತಿದ್ದಂತಹ ರೋಗಿಗಳಿಗೆ ಸ್ಥಳೀಯವಾಗಿ ಚಿಕಿತ್ಸೆ ನೀಡುವ ಸಲುವಾಗಿ ಈ ಸೆಂಟರ್ ಅನ್ನು ತೆರೆಯಲಾಗಿದೆ.
ತುಮಕೂರು ಸ್ಮಾರ್ಟ್ ಸಿಟಿ ಯೋಜನೆ ಅಡಿ ಈ ಟ್ರಾಮಾ ಕೇರ್ ಸೆಂಟರ್ ಅನ್ನು ತೆರೆಯಲಾಗಿದೆ. ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂದಿನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇದಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು.
ಉನ್ನತ ಮಟ್ಟದ ಆರೋಗ್ಯ ಚಿಕಿತ್ಸಾ ಸೌಲಭ್ಯವನ್ನು ಕಲ್ಪಿಸುವ ಸಲುವಾಗಿ ಇದನ್ನು ತೆರೆಯಲಾಗಿದೆ.ಶಾಸಕರಾದ ಜ್ಯೋತಿ ಗಣೇಶ್, ಸುರೇಶ್ ಗೌಡ, ಜಿಲ್ಲಾಧಿಕಾರಿ ಶ್ರೀನಿವಾಸ್, ಜಿಲ್ಲಾ ಎಸ್ ಪಿ ಅಶೋಕ್ ಹಾಜರಿದ್ದರು.


