ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ಕಾರ್ಯಾರಂಭ ಮಾಡಿರುವ 2ನೇ ಟರ್ಮಿನಲ್ ನಲ್ಲಿರುವ ಮೂಲ ಸೌಕರ್ಯಕ್ಕೆ ಪ್ರಸಿದ್ಧ ನಟ, ನಿರ್ದೇಶಕ ಹಾಗೂ ಲೇಖಕ ಆರ್. ಮಾಧವನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿ ವಿಡಿಯೋ ಸಂದೇಶವನ್ನು ಬಿತ್ತರಿಸಿದ್ದಾರೆ. ಇದಕ್ಕೆ ಲಕ್ಷಾಂತರ ಲೈಕ್ ಗಳು ಬಂದಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರೂ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.


