ರಾಜಧಾನಿ ಬೆಂಗಳೂರು ನಗರದಲ್ಲಿ ನಾಯಿಕೊಡೆಗಳಂತೆ ಅನಧಿಕೃತ ಚುನಾವಣಾ ಹೋರ್ಡಿಂಗ್ ಗಳು ತಲೆ ಎತ್ತುತ್ತಿರುವುದರಿಂದ ಸಾರ್ವಜನಿಕರು, ಅದರಲ್ಲೂ ಮುಖ್ಯವಾಗಿ ನಗರದ ನಿವಾಸಿಗಳು ತೊಂದರೆ ಅನುಭವಿಸುವಂತಾಗಿದೆ ಎಂದು ಹೈಕೋರ್ಟ್ ಬೇಸರ ವ್ಯಕ್ತಪಡಿಸಿದೆ.
ನಗರದಲ್ಲಿನ ಅನಧಿಕೃತ ಜಾಹೀರಾತು ಫಲಕಗಳ ಹಾವಳಿ ತಡೆಯಲು ಬಿಬಿಎಂಪಿಗೆ ನಿರ್ದೇಶಿಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಮಾಯಿಗೇಗೌಡ ಮತ್ತಿತರರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.


