ರಾಮನಗರ: ಮೊರಾರ್ಜಿ ವಸತಿ ಶಾಲೆ ಗೋಡೆ ಕುಸಿದು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಹೊಸೂರು ಗೊಲ್ಲಳ್ಳಿಯಲ್ಲಿ ನಡೆದಿದೆ. ವಿದ್ಯಾರ್ಥಿ ಕೌಶಿಕ್ (12) ಮೃತ ದುರ್ದೈವಿ.
ಬೆಳಗ್ಗೆ ಸ್ನಾನಕ್ಕೆ ತೆರಳಿದ್ದಾಗ ಈ ಘಟನೆ ನಡೆದಿದೆ. ಗೋಡೆಯ ಅವಶೇಷಗಳಡಿ ಸಿಲುಕಿ ಗಾಯಗೊಂಡಿದ್ದ ಕೌಶಿಕ್ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರೆಳೆದಿದ್ದಾರೆ. ನೀರು ಸಂಗ್ರಹಕ್ಕೆ ತಡೆಗೋಡೆ ನಿರ್ಮಿಸಲಾಗಿತ್ತು. ನೀರಿನ ಪ್ರಮಾಣ ತಡೆಯಲಾಗದೇ ಗೋಡೆ ಕುಸಿದಿದೆ.


