ಹುಬ್ಬಳ್ಳಿ: ತಮಿಳುನಾಡಿಗೆ ಮತ್ತೆ ನೀರು ಹರಿಸಲು ಸುಪ್ರೀಂಕೋರ್ಟ್ ಆದೇಶ ರಾಜ್ಯದ ರೈತರನ್ನು ಬಲಿಕೊಟ್ಟು ಕಾಂಗ್ರೆಸ್ ಸರ್ಕಾರ ದ್ರೋಹ ಮಾಡಿದೆ ಎಂದು ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
‘ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರ ವಿಸರ್ಜನೆ ಮಾಡಬೇಕು. ನಮಗೆ ಕುಡಿಯೋಕೆ ನೀರಿಲ್ಲ. ಆದ್ರೆ, ಕಾಂಗ್ರೆಸ್ ಸರ್ಕಾರ ನೀರು ಬಿಡುತ್ತಿದೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿಯನ್ನು ಕಾಂಗ್ರೆಸ್ ತಂದಿಟ್ಟಿದೆ ಎಂದು ಕಿಡಿಕಾರಿದ್ದಾರೆ.


