ದೂರವಾಗಿದ್ದ ಪತ್ನಿ ವಾಪಸ್ ಬಾರದ ಹಿನ್ನೆಲೆಯಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ ನಡೆದಿದೆ. 32 ವರ್ಷದ ರಾಜೇಶ್ ಆತ್ಮಹತ್ಯೆ ಮಾಡಿಕೊಂಡವರು. ಮದ್ಯವ್ಯಸನಿ ಪತಿಯೊಂದಿಗೆ ಜಗಳ ಮಾಡಿಕೊಂಡು ಮಹಿಳೆ ತವರು ಮನೆಗೆ ಹೋಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮಾಹಿತಿ ಪಡೆದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪತಿಯ ಅತಿಯಾದ ಕುಡಿತದಿಂದ ಮನನೊಂದ ಮಹಿಳೆ ತನ್ನ ಮನೆಗೆ ಹೋಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ದಂಪತಿಗೆ ಮೂವರು ಮಕ್ಕಳಿದ್ದಾರೆ. ಪತ್ನಿ ತೊರೆದ ಬಳಿಕ ರಾಜೇಶ್ ಮಕ್ಕಳೊಂದಿಗೆ ವಾಸವಾಗಿದ್ದ.
ಪತ್ನಿಯನ್ನು ಮನೆಗೆ ಕರೆತರಲು ಪತಿ ಎಷ್ಟು ಸಾಧ್ಯವೋ ಅಷ್ಟು ಸಮಾಧಾನ ಮಾಡಿದರೂ ಪತ್ನಿ ಮಣಿಯದ ಕಾರಣದ ಪತಿ ರಾಜೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಮೂಲವು ತಿಳಿಸಿದೆ.


